ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ:-ಸಂತೋಷ ಬಿರಾದಾರ್

ಕುಕನೂರು:-ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ್ ಅಭಿಪ್ರಾಯಿಸಿದರು.

 ಕಾಯಕ ಶರಣರ ಜಯಂತ್ಯೋತ್ಸವದಲ್ಲಿ ಕುಕನೂರು ತಾಲೂಕ ಪಂಚಾಯತ್ ಕಾರ್ಯಾಲಯದಲ್ಲಿ ಕಾಯಕ ಶರಣರ ಭಾವಚಿತ್ರಕ್ಕೆ ಪೂಜೆಯನ್ನು ಸಮರ್ಪಿಸಿ ಅವರು ಮಾತನಾಡಿದರು.

ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಚಿರಪರಿಚಿತವಾಗಿವೆ, 

ಶರಣರ ವಚನಗಳು ಇಂದಿನ ಆಧುನಿಕ ಯುಗದಲ್ಲಿ ಅತ್ಯವಶ್ಯಕವಾಗಿವೆ. ಯುವ ಪೀಳಿಗೆ ಅವರ ಆದರ್ಶಗಳನ್ನು ಪಾಲಿಸಿ ಮುನ್ನಡೆಯಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಶರಣಪ್ಪ ಕೆಳಗಿನಮನಿ ಸಹಾಯಕ ನಿರ್ದೇಶಕರು, ಸದ್ದಾಮ್ ಹುಸೇನ್ ಲೆಕ್ಕ ಸಹಾಯಕರು, ಲಕ್ಷ್ಮಣ್ ಕೆರಳಿ, ಗಿರೀಶ್ ಗುಡೂರು, ಸುರೇಶ ದೇಸಾಯಿ, ರಾಜಭಕ್ಷಿ ಕಲಬಂಡಿ, ಮಹದೇವಯ್ಯ ಸಸಿಮಠ, ಯಲ್ಲಪ್ಪ ನಿಡಶೇಶಿ ಹಾಗೂ ಕಾರ್ಯಾಲಯದ ಸಿಬ್ಬಂದಿ ವರ್ಗದವರು ಇತರರು ಇದ್ದರು.

ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713

Leave a Reply

Your email address will not be published. Required fields are marked *