ಡಾ.ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗೆ ಹೃದಯಘಾತ: ಆಸ್ಪತ್ರೆಗೆ ದಾಖಲು..

 

ರಾಯಚೂರು: ಜಗದ್ಗುರು ಡಾ. ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗೆ ಹೃದಯಾಘಾತ ಸಂಭವಿಸಿದ್ದು, ಶ್ರೀಗಳ ಹೈದರಾಬಾದ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ವಾಲ್ಮೀಕಿ ಶ್ರೀಗಳಿಗೆ ಲಘು ಹೃದಯಘಾತವಾಗಿದೆ ಎಂದು ತಿಳಿದು ಬಂದಿದ್ದು, ಸುದ್ದಿ ಬಳಿಕ ಹೊರಬಂದಿದೆ ಶ್ರೀಗಳ ಆರೋಗ್ಯದ ಬಗ್ಗೆ ಭಕ್ತರು ಆತಂಕಗೊಂಡಿದ್ದಾರೆ. 

ರಾಯಚೂರು ಜಿಲ್ಲಾ ಪ್ರವಾಸದಲ್ಲಿದ್ದ ಶ್ರೀಗಳು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀಗಳಾದ ಜಗದ್ಗುರು ಡಾ. ವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮೀಜಿ ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದರು. ತಿಂಥಣಿ ಬ್ರಿಡ್ಜ್ ಬಳಿಯ ಬಂಡೋಳ್ಳಿ ಗ್ರಾಮದಲ್ಲಿರುವ ಶ್ರೀಮಠದ ಉದ್ದೇಶಿತ ವಿದ್ಯಾಸಂಸ್ಥೆಗೆ ಭೇಟಿ ನೀಡಿದ್ದರು. ಕಾರ್ಯಕ್ರಮಕ್ಕೆ ಹೋಗ್ತಿದ್ದ ವೇಳೆ ಹೃದಯಘಾತ ನಂತರ ಕನಕಪೀಠಕ್ಕೆ ತೆರಳಿ ಇತ್ತೀಚೆಗೆ ಲಿಂಗೈಕ್ಯರಾಗಿದ್ದ ಸಿದ್ಧರಾಮಾನಂದಪುರಿ ಸ್ವಾಮಿಗಳು ಗದ್ದುಗೆಗೆ ಪೂಜೆ ಸಲ್ಲಿಸಿದ ಶ್ರೀಗಳು, ಆ ನಂತರ ಹಟ್ಟಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಹೃದಯಘಾತ ಸಂಭವಿಸಿದೆ. ತಿಳಿದು ಬಂದಿದೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಗಂಗಾವತಿಯ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವೀರಭದ್ರಪ್ಪ ನಾಯಕ್ ಪತ್ರಕರ್ತ ರಮೇಶ್ ಜೋಗಿನ್ ಹನುಮಂತಪ್ಪ ನಾಯಕ್ ಅವರು ಶ್ರೀ ದುರ್ಗಾದೇವಿಗೆ ಪ್ರಾರ್ಥಿಸಿದ್ದಾರೆ.

ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ, ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞9164386713

Leave a Reply

Your email address will not be published. Required fields are marked *