*ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ : ಅಧ್ಯಕ್ಷ ಸಿದ್ದಯ್ಯ ಕಳ್ಳಿಮಠ*

ಕುಕನೂರು : ಕರ್ನಾಟಕ ಸರಕಾರದ ಆದೇಶದಂತೆ ಕ್ಷೇತ್ರದ ಅವಳಿ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳು ಮತ್ತು ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮಾರ್ಚ್ 01 ರಂದು ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಾಗುತ್ತದೆ ಎಂದು ಕುಕನೂರು ತಾಲೂಕ ಜಂಗಮ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಸಿದ್ದಯ್ಯ ಕಳ್ಳಿಮಠ ಹೇಳಿದರು.
ಅವರು ಮಂಗಳವಾರದಂದು ಮಾಧ್ಯಮದೊಂದಿಗೆ ಮಾತನಾಡಿ ಕುಕನೂರು ತಾಲೂಕಿನ ಜಂಗಮ ಬಾಂಧವರು ಮಾರ್ಚ್ ತಿಂಗಳು ಒಂದನೇ ತಾರಿಖಿನಂದು ನಿಮ್ಮ ಮನೆಗಳಲ್ಲಿ ಹಾಗೂ ನಿಮ್ಮ ಗ್ರಾಮಗಳಲ್ಲಿ ಹಾಗೂ ಶಾಲಾ ಕಾಲೇಜುಗಳು, ಸರಕಾರಿ ಕಚೇರಿಗಳಲ್ಲಿ ಮಾ. 01ರಂದು ಆಚರಿಸುವಂತೆ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.
ಪಟ್ಟಣದಲ್ಲಿ ಮಾ. 01ರಂದು ನಡೆಯುವ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಸರ್ವರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕುಕನೂರು ತಾಲೂಕು ಜಂಗಮ ಸಮಾಜದ ಅಧ್ಯಕ್ಷ ರಾದ ಶ್ರೀ ಸಿದ್ದಯ್ಯ ಕಳ್ಳಿಮಠ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713