*ಸರಕಾರಿ ಶಾಲೆಗಳಿಗೆ ರಂಗ ಶಿಕ್ಷಕರ ನೇಮಕವಾಗಲಿ ಕೊಪ್ಪಳದಲ್ಲಿ ರಂಗಕರ್ಮಿಗಳ ಮನವಿ.* 

Breaking news:-ನಿರ್ಭಯ ದೃಷ್ಟಿ ನ್ಯೂಸ್ 

ಕೊಪ್ಪಳ :-ಸರ್ಕಾರಿ ಶಾಲೆಗಳಲ್ಲಿ ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಿ ಎಂದು ಕೊಪ್ಪಳದ ಜಿಲ್ಲಾಧಿಕಾರಿಗಳ ಮೂಲಕ

ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ನವರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶಿವರಾಜ ತಂಗಡಗಿ ಅವರಿಗೆ ಮನವಿ ಸಲ್ಲಿಸಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ತಂಡಗಳ ಸುವರ್ಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ “ಹೊನ್ನಾರು ರಂಗೋತ್ಸವದಲ್ಲಿ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಶಿಕ್ಷಣ ಇಲಾಖೆಯಲ್ಲಿ ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು ಕೊಟ್ಟಿದ್ದರು.

ಈ ಹಿಂದೆ 2008 ರಲ್ಲಿ ಕರ್ನಾಟಕದ 50 ಪ್ರೌಢಶಾಲೆಗಳಲ್ಲಿ ರಂಗ ಪದವೀಧರರನ್ನು ನೇಮಿಸಲಾಯಿತು ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ರಂಗ ಶಿಕ್ಷಕರಾಗಿ ಸೇವೆಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ರಂಗಕರ್ಮಿ ಶರಣು ಶೆಟ್ಟರ್ ಶರಣು ಗಡ್ಡಿ ಸುಭಾನ್ ನಿರ್ಲಗಿ ಸತ್ಯನಾರಾಯಣ ಯಲಮನಚಗಿ ಮತ್ತು ಇತರರು ಇದ್ದರು.

 

ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713

Leave a Reply

Your email address will not be published. Required fields are marked *