ಜೀವನದಲ್ಲಿ ಯಶಸ್ಸು ಕಾಣಲು ಮೊದಲು ಶ್ರಮಪಡಬೇಕು. ನಂತರ ತಕ್ಕ ಫಲ ದೊರೆಯುವುದು ಎಂದು ಬಾಲಕಿಯರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಗೋಣೆಪ್ಪ ಹಿರೇಮನಿ ಅಭಿಪ್ರಾಯಪಟ್ಟರು.

ಕುಕುನೂರು ಪಟ್ಟಣದ ಬಾಲಕಿಯರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2025-26ನೇ ಸಾಲಿನ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ. ಅದಕ್ಕೆ ಪೂರಕವಾಗಿ ಮಕ್ಕಳು ನಿರಂತರವಾಗಿ ಅಭ್ಯಾಸ ಮಾಡಿ ಜ್ಞಾನ ಸಂಪಾದನೆ ಮಾಡಿದ್ದಲ್ಲಿ ನಿಶ್ಚಿತ ಗುರಿಯನ್ನು ಮುಟ್ಟಿ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ. ಪ್ರತಿಯೊಂದು ವಿದ್ಯಾರ್ಥಿಯು ತಾನು ಯಾರು, ಏನು ಮಾಡಬೇಕು, ಮತ್ತೆ ಏನು ಮಾಡುತ್ತಿದ್ದೇನೆ ಎಂದು ಸ್ವತಃ ತಾನೇ ಪ್ರಶ್ನೆ ಮಾಡಿಕೊಂಡು ಅಭ್ಯಾಸ ಮಾಡಿದ್ದಲ್ಲಿ ಅಗ್ರ ಶ್ರೇಣಿಯಲ್ಲಿ ಪಾಸಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಭಯ ಹಾಗೂ ಗೊಂದಲ ಮಕ್ಕಳ ಶೈಕ್ಷಣಿಕ ಹಿನ್ನಡೆಗೆ ಕಾರಣವಾಗಬಹುದು. ಆದ್ದರಿಂದ ಮಕ್ಕಳು ಹೆದರದೆ ಧೈರ್ಯವಾಗಿ ಪರೀಕ್ಷೆಯನ್ನು ಎದುರಿಸಬೇಕು ಎಂದರು.
ಶಿಕ್ಷಕಿ ಶಾಂತದೇವಿ ಹಿರೇಮಠ ಮಾತನಾಡಿ ಪ್ರತಿಯೊಬ್ಬ ವಿದ್ಯಾರ್ಥಿಗೆ ಮುಂದೆ ಗುರಿ, ಹಿಂದೆ ಗುರು ಇದ್ದರೆ ಯಶಸ್ಸು ಸಾಧ್ಯ. ಅದಕ್ಕಾಗಿ ಎಲ್ಲ ವಿದ್ಯಾರ್ಥಿಗಳು ಛಲ ಬಿಡದೆ ಸತತ ಪ್ರಯತ್ನದಿಂದ ಅಭ್ಯಾಸದಲ್ಲಿ ಕರಗತಗೊಳಿಸಿಕೊಳ್ಳಬೇಕು
ಮಕ್ಕಳ ಸ್ವಾಭಿಮಾನಿ ಬದುಕಿಗೆ ಶಿಕ್ಷಣ ಮುಖ್ಯ. ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿಸದೇ ಉತ್ತಮ ಶಿಕ್ಷಣಕೊಡಿಸಿ ಸರ್ಕಾರ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚು ಸೌಲಭ್ಯಗಳನ್ನು ಕಲ್ಪಿಸುತ್ತಿದ್ದು, ಪಾಲಕರು ಮಕ್ಕಳನ್ನು ವಿದ್ಯಾವಂತರನ್ನಾಗಿಸಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಗುರಿ ಏನೆಂಬುದನ್ನು ಇಟ್ಟುಕೊಂಡು ಮುನ್ನಡೆಯಬೇಕು. ವಿದ್ಯಾರ್ಥಿಯಾದವರು ವಿದ್ಯಾಭ್ಯಾಸದೊಂದಿಗೆ ಯಶಸ್ವಿಯಾಗಿ ಸಾಧನೆ ಮಾಡುತ್ತ ಮಹತ್ವದ ಗುರಿ ಹೊಂದಿ ಹಿಂದೆ ಗುರಿವಿನ ಆಶೀರ್ವಾದದೊಂದಿಗೆ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಕಿವಿಮಾತು ಹೇಳಿದರು.
ಸಂದರ್ಭದಲ್ಲಿ ಸಹ ಶಿಕ್ಷಕರಾದ ಸರೋಜಾ ಕೆ, ಸಿದ್ದಮ್ಮ ಹಿರೇಮಠ, ಅನ್ನಪೂರ್ಣ ಚೌದ್ರಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ಪ್ರಕಾಶ ಚಂಡೂರ, ಅಡಿವೆಪ್ಪ ಹರ್ಲಾಪೂರ್, ಶ್ರೀಮತಿ ಪಾರ್ವತಿ ದೇವಪ್ಪ ಶೋಬಾನದ, ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಮತ್ತು ಪಾಲಕರು ಎಸ್ ಡಿ ಎಂ ಸಿ ಸದಸ್ಯರುಗಳು ಶಾಲಾ ವಿದ್ಯಾರ್ಥಿನಿಯರು ಇತರರು ಇದ್ದರು.
ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713
