*ಉಚಿತ ಕಣ್ಣಿನ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರ,,*
*ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ : ಸಿದ್ದಯ್ಯ ಕಳ್ಳಿಮಠ ಮನವಿ*

ಕುಕನೂರು : ಪಟ್ಟಣದ ಶ್ರೀ ಯಮನೂರು ಸ್ವಾಮಿ ಉರುಸಿನ ಅಂಗವಾಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಕುಕನೂರು, ಹಿಂದೂ ಮುಸ್ಲಿಂ ಶ್ರೀ ಯಮನೂರಸ್ವಾಮಿ ಸೇವಾ ಸಮಿತಿ, ಕುಕನೂರು, ವಿನಾಯಕ ಆಪ್ಟಿಕಲ್ಸ್ ಮತ್ತು ಕಣ್ಣಿನ ಪರೀಕ್ಷಾ ಕೇಂದ್ರ, ಕುಕನೂರ ಜಯಪ್ರಿಯ ಕಣ್ಣಿನ ಆಸ್ಪತ್ರೆ, ಹುಬ್ಬಳ್ಳಿ ಇವರುಗಳ ಸಂಯುಕ್ತಾಶ್ರಯದಲ್ಲಿ
ಉಚಿತ ಕಣ್ಣಿನ ತಪಾಸಣಾ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ದಿ. 10ರಂದು ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿದ್ದಯ್ಯ ಕಳ್ಳಿಮಠ ಮತ್ತು ಉಪಾಧ್ಯಕ್ಷರಾದ ಭರಮಪ್ಪ ತಳವಾರ ಸರ್ವ ಸದಸ್ಯರು ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣ್ಣಿನ ತಪಾಸಣೆ ಮತ್ತು ಶಸ್ತ್ರಚಿಕಿತ್ಸೆ ಶಿಬಿರ ಮಾರ್ಚ್ 10ರ ಮಂಗಳವಾರದಂದು ಕುಕನೂರು ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ದಲ್ಲಿ ನೆರವೇರುತಿದ್ದು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ*