ಗವಿಸಿದ್ದೇಶ್ವರ ಪ್ರೌಢಶಾಲೆಯ ಬಾಲಕಿಯರ ತಂಡ ಥ್ರೋ ಬಾಲ್ ಕ್ರೀಡಾಕೂಟದಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆ

ಕುಕನೂರು ಪಟ್ಟಣದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ಬಾಲಕಿಯರ ತಂಡವು ಅಕ್ಟೋಬರ್ 15 ಬುಧವಾರದಂದು ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋ ಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದಿಂದ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

 

ವಿದ್ಯಾರ್ಥಿನಿಯರ ಸಾಧನೆಗೆ ಕೊಪ್ಪಳ ಗವಿಸಿದ್ದೇಶ್ವರ ಮಠದ ಶ್ರೀ ಗವಿಶ್ರೀಗಳವರು ಮತ್ತು ಆಡಳಿತ ಮಂಡಳಿಯವರು ಕುಕುನೂರು ಪಟ್ಟಣದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ಆಡಳಿತ ಮಂಡಳಿ ಶಾಲೆಯ ಮುಖ್ಯೋಪಾಧ್ಯಾಯರಾದ ವೆಂಕಟೇಶ ಬಂಡಿವಡ್ಡರ್ ದೈಹಿಕ ಶಿಕ್ಷಕರ ಆರ್‌.ಡಿ ರಾಠೋಡ್ ಹಾಗೂ ಶಾಲೆಯ ಎಲ್ಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯರ ಈ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ವಿಭಾಗ ಮಟ್ಟದಲ್ಲಿ ಜಯಶಾಲಿಗಳಾಗಿ ಬರಲಿ ಎಂದು ಹರ್ಷ ವ್ಯಕ್ತಪಡಿಸಿದ್ದರು.

ವರದಿ ಚನ್ನಯ್ಯ ಹಿರೇಮಠ ಕುಕನೂರು

Leave a Reply

Your email address will not be published. Required fields are marked *