ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಮುಂದಾಗಬೇಕು : ಶಿಕ್ಷಣ ಸಂಯೋಜಕ ರವಿ ಡಿ ಮಳಗಿ
ಕುಕನೂರು:-ನಿರ್ಭಯ ದೃಷ್ಟಿ ನ್ಯೂಸ್
ಮಾದಕ ದ್ರವ್ಯಗಳನ್ನು ವಿತರಿಸುವ ಜಾಲವನ್ನೂ ಮಟ್ಟಹಾಕಲು ಕಾನೂನಿನೊಂದಿಗೆ ಸಹಕರಿಸುವುದು, ಮಾದಕ ವಸ್ತುಗಳನ್ನು ಬಳಸುತ್ತಿರುವವರಿಗೆ ಅವುಗಳ ಮಾರಕ ಪರಿಣಾಮದ ಕುರಿತು ತಿಳುವಳಿಕೆ ನೀಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಯುವ ಜನತೆ ಮುಂದಾಗಬೇಕು ಎಂದು ಶಿಕ್ಷಣ ಸಂಯೋಜಕ ರವಿ ಡಿ ಮಳಿಗೆ ಹೇಳಿದರು.
ಅವರು ಕುಕನೂರು ತಾಲೂಕಿನ ಮಂಗಳೂರು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ನವದೆಹಲಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ ನಶಾ ಮುಕ್ತ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ.ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದು ಹೇಳಿದರು.
ಯವಕರು ರಾಷ್ಟ್ರದ ಶಕ್ತಿಯಾಗಿದ್ದಾರೆ ಯುವ ಶಕ್ತಿಯು ಸಮಾಜ ಮತ್ತು ದೇಶದ ಅಭಿವೃದ್ಧಿಯಲ್ಲಿ ಕೊಡುಗೆಯನ್ನು ಹೊಂದಿದ್ದಾರೆ
ನಶಾ ಮುಕ್ತ ಭಾರತ ಅಭಿಯಾನದಲ್ಲಿ ಗರಿಷ್ಟ ಸಂಖ್ಯೆಯ ಯುವಕ ಯುವತಿಯರು ಸೇರುವುದು ಬಹಳ ಮುಖ್ಯ ದೇಶದ ಸವಾಲನ್ನು ಸ್ವೀಕರಿಸಿ ಇಂದು ನಾವು ನಶಾ ಮುಕ್ತ ಭಾರತ ಅಭಿಯಾನದಲ್ಲಿ ಒಂದಾಗಿದ್ದೇವೆ.
ಸ್ನೇಹಿತರು ಕುಟುಂಬ ಸಮಾಜ ಮಾತ್ರವಲ್ಲದೆ ನಾವು ಸಹ ಮಾದಕ ವಾಸನ ಮುಕ್ತರಾಗುತ್ತೇವೆ ಏಕೆಂದರೆ ಬದಲಾವಣೆ ನಮ್ಮಿಂದಲೇ ಪ್ರಾರಂಭವಾಗಬೇಕು
ಆದ್ದರಿಂದ ನಾವೆಲ್ಲರೂ ಸೇರಿ ನಮ್ಮ ಕೊಪ್ಪಳ ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತಗೊಳಿಸಲು ದೃಢ ನಿರ್ಧಾರ ಕೈಗೊಳ್ಳೋಣ
ನನ್ನ ದೇಶವನ್ನು ಮಾದಕ ದ್ರವ್ಯ ಮುಕ್ತಗೊಳಿಸಲು ನನ್ನ ಸಾಮರ್ಥ್ಯಕ್ಕನುಗುಣವಾಗಿ ಸಾಧ್ಯವಿರುವ ಎಲ್ಲವನ್ನು ಮಾಡುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತೇನೆ ಮೇಲಿನ ಎಲ್ಲಾ ಅಂಶಗಳನ್ನು CRP ರವಿ ಡಿ ಮಳಿಗಿಯವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಉಪ ತಹಶಿಲ್ದಾರ ಬಸವರಾಜ ಕ್ಯಾತನಗೌಡ, ಶಿಕ್ಷಕರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ವಿಕಲಚೇತನ ಸಂಯೋಜಕ ಗುರುಲಿಂಗಪ್ಪ ಗೊಂಡಬಾಳ,ಮತ್ತು ಸಾರ್ವಜನಿಕರು ಹಾಜರಿದ್ದರು.
ಸುದ್ದಿ ಜಾಹಿರಾತಿಗಾಗಿ ಸಂಪರ್ಕಿಸಿ
ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು 9164386713