ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ವಿವಿಧ ಕ್ರೀಡಾಾಕೂಟದಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆ ,

ಕುಕುನೂರು ಪಟ್ಟಣದ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು 10. 11. 2025 ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಗವಿಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಶೈಲ ಮನ್ನಾಪುರ ಚಕ್ರ ಎಸೆತದಲ್ಲಿ ಮತ್ತು ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಅಪೂರ್ವ ಲಿಂಗಾಪುರ ಸರಪಳಿ ಗುಂಡು ಎಸೆತದಲ್ಲಿ ತೃತೀಯ ಸ್ಥಾನ ಪಡೆದು ಶ್ರೀ ಗವಿಸಿದ್ದೇಶ್ವರ ಶಾಲೆಗೆ ಕೀರ್ತಿ ತಂದಿರುತ್ತಾರೆ.
ಈ ವಿದ್ಯಾರ್ಥಿನಿಯರಿಗೆ ಶಾಲಾ ಆಡಳಿತ ಮಂಡಳಿಯವರು ಮತ್ತು ಮುಖ್ಯೋಪಾಧ್ಯಾಯರು ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ದೈಹಿಕ ಶಿಕ್ಷಕರಾದ ರಾಜಕುಮಾರ್ ರಾಥೋಡ್ ಇವರು ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿರುತ್ತಾರೆ.
ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು
ಚನ್ನಯ್ಯ ಹಿರೇಮಠ ಕುಕನೂರು