ಶ್ರೀ ಮಹೇಶ್ವರ ಪದವಿಪೂರ್ವ ಕಾಲೇಜ್ ಪ್ರೌಢಶಾಲಾ ವಿದ್ಯಾರ್ಥಿನಿ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ತಾಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಪ್ರಥಮ ಸ್ಥಾನ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಕುಕನೂರು -ಯಲಬುರ್ಗಾ ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಬಹುಪಯೋಗಿ ಗ್ಯಾಸ್ ಪ್ಲೇಟ್ ಮಾಡುವುದರ ಮೂಲಕ ಶ್ರೀ ಮಹೇಶ್ವರ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಯಾದ ಕುಮಾರಿ ಭಾರತಿ ಬಡಿಗೇರ್ ಇಂಜಿನಿಯರಿಂಗ್ ವಿಭಾಗದಲ್ಲಿ ತಾಲೂಕು ಮಟ್ಟದ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಕುಮಾರ ಹುಚನೂರ ವಿಜ್ಞಾನ ಶಿಕ್ಷಕರ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿನಿಗೆ ಬಿ ಆರ್ ಪಿ ಗಳಾದ ಶರಣಗೌಡ ಪಾಟೀಲ್ ಪ್ರಶಸ್ತಿ ವಿತರಿಸಿದರು.
ಇವರ ಈ ಸಾಧನೆಗೆ ಶ್ರೀ ಮಹೇಶ್ವರ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾ ಶಿಕ್ಷಕರು ಆಡಳಿತ ಮಂಡಳಿಯವರು ವಿದ್ಯಾರ್ಥಿನಿಯ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಜಾಹೀರಾತಿಗಾಗಿ , ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು
ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ. 📞9164386713