ಹೆಲ್ಮೆಟ್ ನ್ನು ಕಡ್ಡಾಯವಾಗಿ ಧರಿಸಿರಿ ನಿಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಿ:-ಎಸ್. ಪಿ. ನಾಯಕ್

ಕುಕನೂರು ತಾಲೂಕಿನ ಬೇವೂರು ಗ್ರಾಮದಲ್ಲಿ ಗ್ರಾಮೀಣ ಭಾಗದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು ಜೀವ ರಕ್ಷಣಾ ಕವಚ ಹೆಲ್ಮೆಟ್ ನ್ನು ಕಡ್ಡಾಯವಾಗಿ ಧರಿಸಿರಿ ನಿಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ಮುಂದಾಗಿ ಎಂದು ಬೇವೂರು ಪೊಲೀಸ್ ಠಾಣೆಯ ಪಿಎಸ್ಐ ಎಸ್.ಪಿ. ನಾಯಕ್
ಅವರು ಪಟ್ಟಣದಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಗುಲಾಬಿ ಹೂ ನೀಡುವ ಮೂಲಕ ಹೆಲ್ಮೆಟ್ ಬಳಕೆ ಕುರಿತು ಜಾಗೃತಿ ಮೂಡಿಸಲಾಯಿತು. ಬೈಕ್ ಸವಾರರು ರಸ್ತೆಯಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮಟ್ ಧರಿಸಬೇಕು. ಇದರಿಂದ ನಿಮ್ಮ ಸುರಕ್ಷೆಯ ಜೊತೆಗೆ ಪ್ರಾಣಾಪಾಯದಿಂದ ಪಾರಾಗಬಹುದು ರಸ್ತೆ ನಿಯಮಗಳನ್ನು ಅರಿತು ಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸಬೇಕು. ಅವಸರವೇ ಅಪಘಾತಕ್ಕೆ ಕಾರಣ ರಸ್ತೆ ನಿಯಮಗಳನ್ನು ಪಾಲಿಸಬೇಕು. ಶಾಲೆ- ಕಾಲೇಜು, ಜನನಿಬಿಡ ಪ್ರದೇಶದಲ್ಲಿ ವೇಗವಾಗಿ ಬೈಕ್ ಚಲಾಯಿಸದೆ, ತಿರುವಿನಲ್ಲಿ ಜಾಗ್ರತೆಯಿಂದ ಸಾಗಬೇಕು ಎಂದರು.
ಹೆಲ್ಮೆಟ್ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವ ಕಾಪಾಡಲಿ ಎಂಬ ಉದ್ದೇಶದಿಂದ ಪೊಲೀಸ್ ಇಲಾಖೆಯದ್ದಾಗಿದೆ. ಯಾವುದೇ ಜನ ಹಿತಾಸಕ್ತಿಯ ಯೋಜನೆ ಸಾಕಾರವಾಗಲು ಜನರ ಸಹಕಾರ ಮುಖ್ಯ. ಆದ್ದರಿಂದ ಸಾರ್ವಜನಿಕರು ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಕೈಜೋಡಿಸಬೇಕು. ಮುಖ್ಯವಾಗಿ ಯುವಕರು ಮೊದಲು ಹೆಲ್ಮೆಟ್ ಧರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಎಂದು ಅವರು ಹೇಳಿದ ಅವರು ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ ಹೆಲ್ಮೆಟ್ ಧರಿಸುವುದರಿಂದ ಅಪಘಾತದ ಸಂದರ್ಭದಲ್ಲಿ ಜೀವ ಉಳಿಯುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಹೆಲ್ಮೆಟ್ ಹಾಕುವಂತೆ” ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬೇವೂರು ಪೊಲೀಸ್ ಠಾಣಾ ಸಿಬ್ಬಂದಿ ವರ್ಗದವರು ಇದ್ದರು.
ಸುದ್ದಿ, ಜಾಹಿರಾತಿಗಾಗಿ ಸಂಪರ್ಕಿಸಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು 📞9164386713