ವಿಭಾಗ ಮಟ್ಟದ ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆಯಲ್ಲಿ ಕೆಎಲ್ಇ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿ ಶಿವಸಿಂಪರ ತೃತಿಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Breakingnews:ನಿರ್ಭಯ ದೃಷ್ಟಿ ನ್ಯೂಸ್ 

ಕುಕುನೂರು ಪಟ್ಟಣದ ಕೆಎಲ್ಇ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ವಾತಿ ಶಿವಸಿಂಪರ ಬಸವಕಲ್ಯಾಣದಲ್ಲಿ 2/ 12/ 2025-ಮಂಗಳವಾರದಂದು ನಡೆದ ಪದವಿ ಪೂರ್ವ ಕಾಲೇಜುಗಳ 2025-26ನೇ ಸಾಲಿನ ಕಲ್ಬುರ್ಗಿ ವಿಭಾಗ ಮಟ್ಟದ ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳ ಸ್ಪರ್ಧೆಯಲ್ಲಿ ವಿಜ್ಞಾನ ಮಾದರಿ ತಯಾರಿಕೆ ಸ್ಪರ್ಧೆಯಲ್ಲಿ ಕುಕನೂರು ಪಟ್ಟಣದ ಕೆಎಲ್ಇ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾದ ಸ್ವಾತಿ ಶಿವಸಿಂಪರ ತೃತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿರುತ್ತಾಳೆ.


ವಿದ್ಯಾರ್ಥಿನಿಯ ಈ ಸಾಧನೆಗೆ ಕೆಎಲ್ಇ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಕೆಎಲ್ಇ ಸಂಸ್ಥೆಯ ಪ್ರಾಚಾರ್ಯರಾದ ಅರುಣ ಕುಮಾರ ಹಿರೇಮಠ ಕಾಲೇಜಿನ ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಗೆ ಅಭಿನಂದನೆ ಸಲ್ಲಿಸಿದ್ದಾರೆ.

*ಸುದ್ದಿ ಜಾಹಿರಾತಿಗಾಗಿ, ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713*

Leave a Reply

Your email address will not be published. Required fields are marked *