ಡಿ 12. ರಂದು ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರ ವಿವಿಧ ಬೇಡಿಕೆಗಳನ್ನು ನೀಡುವಂತೆ ಬೆಳಗಾವಿಯ ಸುವರ್ಣ ಸೌಧದ ಮುಂದೆ ಬೃಹತ್ ಪ್ರತಿಭಟನೆ,

Breaking news:-ನಿರ್ಭಯ ದೃಷ್ಟಿ ನ್ಯೂಸ್-
ಕುಕನೂರು
ಡಿಸೆಂಬರ್ 12ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ಅಖಿಲ ಕರ್ನಾಟಕ ಅನುದಾನಿತ ಶಾಲಾ ಕಾಲೇಜುಗಳ ನೌಕರರು ವಿವಿಧ ಬೇಡಿಕೆಗಳಾದ 2006ರ ನಂತರ ಅನುದಾನಿತ ವಿದ್ಯಾ ಸಂಸ್ಥೆಗಳಲ್ಲಿ ನೇಮಕಗೊಂಡ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆಯನ್ನು, ಜ್ಯೋತಿ ಸಂಜೀವಿನಿ ಯೋಜನೆಯನ್ನು ಹೆಚ್ಚುವರಿ ಶಿಕ್ಷಕರ ಸಮಸ್ಯೆಯನ್ನು ಹಾಗೂ ಸರಕಾರಿ ಪ್ರೌಢಶಾಲೆಗಳಿಗೆ ನೀಡುವ ಎಲ್ಲಾ ಸೌಕರ್ಯಗಳನ್ನು ಯಥಾವತ್ತಾಗಿ ಅನುದಾನಿತ ವಿದ್ಯಾಸಂಸ್ಥೆಗಳ ನೌಕರರಿಗೆ ಮತ್ತು ಮಕ್ಕಳಿಗೆ ನೀಡಬೇಕೆಂದು ಒತ್ತಾಯಿಸಿ ಬೃಹತ್ ಘಟನೆಯನ್ನು ಹಮ್ಮಿಕೊಂಡಿದ್ದು ಕುಕನೂರು ಹಾಗೂ ಯಲಬುರ್ಗಾ ತಾಲೂಕಿನ ನೌಕರರು ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು , ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ ಉಮಚಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿ ಜಾಹೀರಾತಿಗಾಗಿ,
ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713