ಶಿಕ್ಷಕರಾದ ಪರಮೇಶ್ವರ್ ಪತ್ತಾರ ರವರು ಜಿಲ್ಲಾ ಮಟ್ಟದ ಚಿತ್ರಕಲೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆ


Breaking news:-ನಿರ್ಭಯ ದೃಷ್ಟಿ ನ್ಯೂಸ್-
ಕುಕನೂರು:-
ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಶಿಕ್ಷಕರ ಸದನ, ಕೆಂಪೇಗೌಡ ರಸ್ತೆ ಬೆಂಗಳೂರು ವತಿಯಿಂದ ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರಿಗೆ 2025- 26ನೇ ಸಾಲಿನ ಜಿಲ್ಲಾ ಹಂತದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳನ್ನು ಪ್ರಾದೇಶಿಕ ವಿಜ್ಞಾನ ಕೇಂದ್ರ ಕೊಪ್ಪಳದಲ್ಲಿ ಡಿಸೆಂಬರ್ 11-12- 2025 ದಂದು ಸ್ಪರ್ಧೆಗಳು ನೆರವೇರಿದವು.
ಕುಕನೂರು ಪಟ್ಟಣದ ಮೊರಾರ್ಜಿ ವಸತಿ ಶಾಲೆಯ ಶಿಕ್ಷಕ ಹಾಗೂ ಮೌಲಾನ ಆಜಾದ್ ಮಾದರಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ಪರಮೇಶ್ವರ್ ಪತ್ತಾರ ರವರು ಜಿಲ್ಲಾ ಮಟ್ಟದ ಚಿತ್ರಕಲೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರ ಈ ಸಾಧನೆಗೆ ಮೊರಾರ್ಜಿ ಶಾಲೆ ಮುಖ್ಯ ಶಿಕ್ಷಕರು ಹಾಗೂ ಮೌಲಾನ ಆಜಾದ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿ ಜಾಹೀರಾತಿಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713