*ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನಕ್ಕಾಗಿ ಎಲ್ಲರೂ ಶ್ರಮಿಸೋಣ ತಾಲೂಕ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗಮೇಶ್ ಗುತ್ತಿ*

*ಸರ್ಕಾರದ ಗ್ರಹಲಕ್ಷ್ಮಿ ಹಣದಿಂದ ಮಕ್ಕಳಿಗೆ ಎಲ್ಐಸಿ ಹಣ ತುಂಬಿದ ಮಂಗಳೂರು ಗ್ರಾಮಸ್ತೆ ಶ್ರೀಮತಿ ಜ್ಯೋತಿ ಕನಕಪ್ಪ ತಳವಾರ್*

ಕುಕನೂರ: ತಾಲೂಕಿನ ಮಂಗಳೂರು ಹೋಬಳಿ ವ್ಯಾಪ್ತಿಯ ಮಂಗಳೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರದಂದು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯನ್ನು ತಾಲೂಕ ಪಂಚ ಗ್ಯಾರಂಟಿ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಸಂಗಮೇಶ್ ಗುತ್ತಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿ ಅವರು ಸರ್ಕಾರ ಬಡವರು, ಮಕ್ಕಳು ಮಹಿಳೆಯರು ಮತ್ತು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಹಲವಾರು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು, ಅದರಂತೆ ಸರ್ಕಾರ ನುಡಿದಂತೆ ಯೋಜನೆಗಳನ್ನು ಜಾರಿಗೆ ತಂದಿದೆ.
ಇದರಿಂದಾಗಿ ಹಲವಾರು ಜನಸಾಮಾನ್ಯರು ಪ್ರಯೋಜನಗಳನ್ನು ಪಡೆಯುತ್ತಾ ಬಂದಿದ್ದಾರೆ ಮುಖ್ಯವಾಗಿ ಬಡವರಿಗೆ ಅನ್ನ ಭಾಗ್ಯ ಯೋಜನೆ ಮೂಲಕ 10 ಕೆಜಿ ಅಕ್ಕಿ ನೀಡುತ್ತಿದ್ದು ಇದರಿಂದಾಗಿ ರಾಜ್ಯವು ಹಸಿವು ಮುಕ್ತ ಕರ್ನಾಟಕ ಮಾಡವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದರು. ಅದಲ್ಲದೆ ವಯಸ್ಸಾದ ನಾಗರಿಕರಿಗಾಗಿ ಮನೆ ಬಾಗಿಲಿಗೆ ರೇಷನ್ ತಲ್ಪಿಸುವ ಒಂದು ಯೋಜನೆಯ ಹಾಕಿಕೊಂಡುದ್ದು ಇದರಿಂದಾಗಿ ವಯಸ್ಸಾದ ನಾಗರೀಕರಿಗೆ ಸಹಾಯವಾಗಲಿದೆ ಎಂದರು. ಈಗಾಗಲೇ ಗೃಹ ಜ್ಯೋತಿ ಯೋಜನೆಯ ಮೂಲಕ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತಿದ್ದು, ಹೊಸ ಗೃಹಜ್ಯೋತಿ ಕನೆಕ್ಷನ್ಗಳಿಗೆ 58 ಯುನಿಟ್ ಗಳ ವಿದ್ಯುತ್ ನೀಡಲಾಗುವುದು, ಶಕ್ತಿ ಯೋಜನೆ ಅಡಿ ರಾಜ್ಯದಲ್ಲಿ ಅತಿ ಹೆಚ್ಚು ಪ್ರಯಾಣಿಕರು ಜಿಲ್ಲೆಯಲ್ಲಿ ಪ್ರಯಾಣಿಸುತ್ತಿದ್ದು ಇದರಿಂದಾಗಿ ಮಹಿಳೆಯರು ಆರ್ಥಿಕ ಮತ್ತು ಸಾಮಾಜಿಕ ಸ್ವಾವಲಂಬನೆ ಸಾಧಿಸಲು ಸಹಕಾರಿಯಾಗಿದೆ ಎಂದರು. ಇದೇ ವೇಳೆಯಲ್ಲಿ *ಜ್ಯೋತಿ ಕನಕಪ್ಪ ತಳವಾರ್ ಮಹಿಳೆಗೆ ಗೃಹಲಕ್ಷ್ಮಿ ಹಣದಿಂದ ತನ್ನ ಮಕ್ಕಳಿಗೆ ಎಲ್ಐಸಿ ಹಣವನ್ನು ತುಂಬಿದ್ದಕ್ಕೆ ತಾಲೂಕ ಅನುಷ್ಠಾನ ಸಮಿತಿಯ ಅಧ್ಯಕ್ಷರು ಸನ್ಮಾನಿಸಿದರು*

ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಪಾಟೀಲ ಬಿರಾದಾರ ಮಾತನಾಡಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಎಲ್ಲರೂ ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಈ ಗ್ರಾಮದ ಮಹಿಳೆ ಎಲ್ಐಸಿ ಪಾಲಿಸಿಯನ್ನ ಮಾಡಿಸಿ ತನ್ನ ಮಕ್ಕಳಿಗಾಗಿ ಬಳಕೆ ಮಾಡಿಕೊಂಡಿರುವುದು ನಿಜವಾಗಲೂ ಈ ಸರ್ಕಾರದ ಯೋಜನೆ ಶ್ಲಾಘನೀಯ ಎಂದು ಹೇಳಿದರು.
ಬೆಟ್ಟದಪ್ಪ ಮಾಳೆಕೊಪ್ಪ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಯಲಬುರ್ಗಾ ಮಾತನಾಡಿ ತಾಲೂಕಿನಲ್ಲಿ ಗೃಹಲಕ್ಷ್ಮಿ ಯೋಜನೆಯಲ್ಲಿ ಶೇಕಡ 99 ರಷ್ಟು ಮಹಿಳೆಯರು ಈ ಗೃಹಲಕ್ಷ್ಮಿ ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ ಎಂದು ಹೇಳಿದರು ಸರ್ಕಾರ ಮಹಿಳೆಯರಿಗಾಗಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಾಲ ನೀಡುತ್ತಿದ್ದು ಮಹಿಳೆಯರು ಈ ಸೌಲಭ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಮಹಿಳೆಯರ ರಕ್ಷಣೆಗಾಗಿ ಅಕ್ಕಪಡೆ ಜಾರಿಗೆ ಮಾಡಿದ್ದಾರೆ ಎಂದು ಹೇಳಿದರು.
ನಾಗರಾಜ ಎಂ. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕಾರ್ಯ ಮತ್ತು ಪಾಲನಾ ಉಪ ವಿಭಾಗ ಜೆಸ್ಕಾಂ ಕುಕನೂರ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಪಿ.ಎಂ ಕುಸುಮ್ ಬಿ ಯೋಜನೆ ಅಡಿ ಸೋಲಾರ್ ಪಂಪ್ ಸೆಟ್ ಹೊಸ ಬೋರ್ ವೆಲ್ ಹಾಕಿಸಲು ಸರ್ಕಾರ ವಿಶೇಷ ಯೋಜನೆಯನ್ನು ಜಾರಿಗೆ ಮಾಡಿದೆ ಎಂದು ರೈತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಸಕ್ರಪ್ಪ ಮಂಗಳಪ್ಪ ಚಿನ್ನೂರು, ಉಪಾಧ್ಯಕ್ಷೆ ಅನ್ನಪೂರ್ಣ ಸುರೇಶ ಮ್ಯಾಗಳೇಶಿ, ಸರ್ವ ಸದಸ್ಯರು, ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಪಿಡಿಓಗಳು ಹಾಜರಿದ್ದರು.
ಕಾರ್ಯಕ್ರಮದ ನಿರ್ವಹಣೆ ಮಂಗಳೂರು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೀಲಂ ಚಳಗೇರಿ, ಹನುಮಂತಪ್ಪ ಸ್ವಾಗತಿಸಿದರು.
ಸಿಬ್ಬಂದಿಗಳು ಬಳಗೇರಿ ಮಂಗಳೂರು, ಹಿರೇಬೀಡನಾಳ, ನೆಲಜೇರಿ, ಶಿರೂರ್ ಮತ್ತು ಕುದುರೆಮತಿ ಗ್ರಾಮ ಪಂಚಾಯತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಆಶಾ ಅಂಗನವಾಡಿ, ಸ್ವ ಸಹಾಯ ಸಂಘದ ಮಹಿಳೆಯರು ಸಾರ್ವಜನಿಕರು ಹಾಜರಿದ್ದರು.
ಸುದ್ದಿ ಜಾಹೀರಾತಿಗಾಗಿ ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713