ಕುಕನೂರು ಪಟ್ಟಣದ ಪೊಲೀಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ

Breaking news:-ನಿರ್ಭಯ ದೃಷ್ಟಿ ನ್ಯೂಸ್*******

ಕುಕನೂರು ಪಟ್ಟಣದ ಪೊಲೀಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಕುಕುನೂರು ಪಟ್ಟಣದ ಬಸ್ ನಿಲ್ದಾಣ ಹಾಗೂ ಶಿರೂರು ವೀರಭದ್ರಪ್ಪ ವೃತ್ತದಲ್ಲಿ ಜಾಗೃತಿ ಮೂಡಿಸಲು ಕುಕನೂರು ಪೊಲೀಸ್ ಠಾಣೆಯ ಏಎಸ್ಐ ನಿಂಗಮ್ಮ ಸಾರ್ವಜನಿಕರಿಗೆ ಕರಪತ್ರಗಳನ್ನು ನೀಡುವುದರೊಂದಿಗೆ ಸಂಚಾರ ನಿಯಮಗಳು , ತುರ್ತುಕರೆ 112 ಮಹಿಳಾ ಸಹಾಯವಾಣಿ,181 ಸೈಬರ್ ವಂಚನೆ, 1930 ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ ಮಾತನಾಡಿ

 ‘ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ’ 

ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ.ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ ಮಾಹೆಯನ್ನು ಅಪರಾಧ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದರು.

ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಆಪರಾಧ ಆಗದಂತೆ ನೋಡಿಕೊಳ್ಳುವುದು ಉತ್ತಮ. ಕರಪತ್ರಗಳು ಮತ್ತು ಸಾರ್ವಜನಿಕ ಸಭೆಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.

ಯಾವುದೇ ಅಪರಾಧವನ್ನು ಕಂಡಿದ್ದ ಸಂದರ್ಭದಲ್ಲಿ ಧೈರ್ಯವಾಗಿ ಮುಂದೆ ಬಂದು ಸಾಕ್ಷಿ ಹೇಳಬೇಕು. ಒಂದು ವೇಳೆ ಹೀಗಾಗದಿದ್ದರೆ, ಸಾಕ್ಷ್ಯಾಧಾರಗಳ ಕೊರತೆಯಿಂದ ತಪ್ಪಿತಸ್ಥರು ತಪ್ಪಿಸಿಕೊಂಡು ಮತ್ತೆ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಲಿದ್ದಾರೆ ಎಂದರು.

ನಗರ ನಿವಾಸಿಗಳು ಮನೆಗೆ ಬೀಗ ಹಾಕಿ ಬೇರೆ ಊರುಗಳಿಗೆ ತೆರಳುವಾಗ ಪೊಲೀಸ್ ಠಾಣೆಗೆ ಲಿಖಿತ ಮಾಹಿತಿ ನೀಡಬೇಕು. ಅಥವಾ ಗೃಹ ರಕ್ಷಕ ತಂತ್ರಾಂಶದಲ್ಲಿ ಬೀಗ ಹಾಕುವ ಮನೆ ಇರುವ ಸ್ಥಳದ ಮಾಹಿತಿ ಸೇರಿಸಬೇಕು ಎಂದು ಮನವಿ ಮಾಡಿದರು.

ಮಹಿಳಾ ಸಹಾಯವಾಣಿ ಸಂಖ್ಯೆ 181ಹಿಂಸಾಚಾರದಿಂದ ಬಳಲುತ್ತಿರುವ ಮಹಿಳೆಯರಿಗೆ 24 ಗಂಟೆಗಳ ಸಹಾಯ ಮತ್ತು ತುರ್ತು ಪ್ರತಿಕ್ರಿಯೆಯನ್ನು ಒದಗಿಸಲು ಮಹಿಳಾ ಸಹಾಯವಾಣಿ ಉದ್ದೇಶಿಸಲಾಗಿದೆ. ಈ ಸಹಾಯವಾಣಿಯು ದೇಶಾದ್ಯಂತ ಮಹಿಳೆಯರಿಗೆ ಸಂಬಂಧಿಸಿದ ಸರ್ಕಾರಿ ಯೋಜನೆಗಳ ಕಾರ್ಯಕ್ರಮಗಳ ಬಗ್ಗೆ ಒಂದೇ ಏಕರೂಪ ಸಂಖ್ಯೆಯ ಮೂಲಕ ಮಾಹಿತಿಯನ್ನು ಒದಗಿಸುತ್ತದೆ. ಮರಣ, ಅನಾರೋಗ್ಯ, ಅಪೌಷ್ಟಿಕತೆ ಮತ್ತು ಶಾಲೆ ಬಿಡುವವರನ್ನು ಕಡಿಮೆ ಮಾಡುವುದು ಮಹಿಳಾ ಸಹಾಯವಾಣಿಯ ಸಂಪೂರ್ಣ ಉದ್ದೇಶವಾಗಿದೆ.

ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಒಂದೇ ಸೂರಿನಡಿ ಹಿಂಸಾಚಾರದಿಂದ ಬಳಲುತ್ತಿರುವ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ಸಹಾಯವನ್ನು ಒದಗಿಸಲು ಮಹಿಳಾ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ.

ಸೈಬರ್ ಅಪರಾಧಗಳ ಪ್ರಕರಣಗಳು ಪ್ರತಿದಿನ ಹೆಚ್ಚುತ್ತಿವೆ, ದೇಶದಲ್ಲಿ ಪ್ರತಿ 5 ನೇ ವ್ಯಕ್ತಿ ಸೈಬರ್ ಅಪರಾಧಕ್ಕೆ ಸಂಬಂಧಿಸಿದ ವಂಚನೆಗಳಿಗೆ ಬಲಿಯಾಗುತ್ತಿದ್ದಾರೆ ಎಂಬ ಅಂಶದಿಂದ ಡಿಜಿಟಲ್ ಅಪರಾಧಗಳ ಪ್ರಮಾಣವು ಹೆಚ್ಚಾಗುತ್ತಿದೆ. ಸಾಫ್ಟ್‌ವೇರ್ ಎಂಜಿನಿಯರ್‌ನಿಂದ ಹಿಡಿದು ಅಶಿಕ್ಷಿತ ರೈತರವರೆಗೆ, ಪ್ರತಿ ದಿನ ನೂರಾರು ಜನರು ವಂಚನೆಗೆ ಒಳಗಾಗುತ್ತಿದ್ದಾರೆ. ವಂಚಕರು ತಮ್ಮ ಗುರಿಗಳನ್ನು ಮೋಸಗೊಳಿಸಲು ಹೊಸ ವಿಧಾನಗಳು ಮತ್ತು ತಂತ್ರಗಳನ್ನು ಬಳಸುತ್ತಿದ್ದಾರೆ. ಈ ಸೈಬರ್ ಅಪರಾಧಿಗಳು ನಿಮ್ಮ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕದಿಯಲು ಕೇವಲ ಒಂದು ಕ್ಷಣ ಮಾತ್ರ ತೆಗೆದುಕೊಳ್ಳುತ್ತದೆ.

ಆದರೆ ನೀವು ಹತ್ತಿರದ ಪೊಲೀಸ್ ಠಾಣೆಗಳಿಗೆ ಪದೇ ಪದೇ ದೂರು ನೀಡಿದಾಗ ಸಮಸ್ಯೆ ಉಲ್ಬಣಗೊಳ್ಳುತ್ತದೆ. ಕೆಲವೊಮ್ಮೆ ಸ್ಥಳೀಯ ಪೊಲೀಸರು ಸೈಬರ್ ಅಪರಾಧ ಪ್ರಕರಣ ಎಂದು ಹೇಳಿ ದೂರು ನೀಡುವುದಿಲ್ಲ. ಹಾಗಾದರೆ ನೀವು ಎಲ್ಲಿಗೆ ಹೋಗುತ್ತೀರಿ ಮತ್ತು ಪೊಲೀಸರಲ್ಲಿ ಸೈಬರ್ ಅಪರಾಧ ದೂರನ್ನು ಹೇಗೆ ನೋಂದಾಯಿಸುವುದು?

ಚಿಂತಿಸಬೇಡಿ, ನಿಮ್ಮ ಸೈಬರ್ ಅಪರಾಧ ದೂರನ್ನು ಯಾವುದೇ ತೊಂದರೆಯಿಲ್ಲದೆ ಆನ್‌ಲೈನ್‌ನಲ್ಲಿ ನೋಂದಾಯಿಸಲು ನಾವು ನಿಮಗೆ ಸುಲಭವಾದ ಮಾರ್ಗಗಳಲ್ಲಿ ಸಹಾಯ ಮಾಡುತ್ತೇವೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಪೊಲೀಸ್ ಠಾಣಾ ಸಿಬ್ಬಂದಿಯವರಾದ ವಿನೋದ ಕಾಮನೂರು, ಚಂದ್ರಶೇಖರ ಪಾಟೀಲ, ಇತರರು ಇದ್ದರು.

 

ನಿರಂತರ ಸುದ್ದಿ ಜಾಹಿರಾತು ಪ್ರಕಟಣೆಗಾಗಿ, ನಿರ್ಭಯ ದೃಷ್ಟಿ ನ್ಯೂಸ್ ಸಂಪಾದಕರು ಚನ್ನಯ್ಯ ಹಿರೇಮಠ ಕುಕನೂರು ಇವರನ್ನು ಸಂಪರ್ಕಿಸಿ 📞 9164386713

Leave a Reply

Your email address will not be published. Required fields are marked *